ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾ ಸೋತ್ರೂ ಫೈನಲ್ ಪಂದ್ಯದಲ್ಲಿ ಮೂರು ದಾಖಲೆ ಬರೆದ ವಿರಾಟ್ ಕೊಹ್ಲಿ..!

admin by admin
June 24, 2021
in Newsbeat, Sports, ಕ್ರೀಡೆ
virat kohli team india saakshatv
Share on FacebookShare on TwitterShare on WhatsappShare on Telegram

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ಟೀಮ್ ಇಂಡಿಯಾ ಸೋತ್ರೂ ಫೈನಲ್ ಪಂದ್ಯದಲ್ಲಿ ಮೂರು ದಾಖಲೆ ಬರೆದ ವಿರಾಟ್ ಕೊಹ್ಲಿ..!

virat kohli team india saakshatvವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಮ್ ಇಂಡಿಯಾ ಸೋತಿರಬಹುದು. ನಾಯಕನಾಗಿ ಪ್ರಶಸ್ತಿ ಗೆಲ್ಲಲು ವಿರಾಟ್ ಕೊಹ್ಲಿ ವಿಫಲನಾಗಿರಬಹುದು.. ಬ್ಯಾಟ್ಸ್ ಮೆನ್ ಆಗಿ ಕೊಹ್ಲಿ ಎರಡೂ ಇನಿಂಗ್ಸ್ ಗಳಲ್ಲಿ ಒಟ್ಟು 57 ರನ್ ಗಳಿಸಿರಬಹುದು.. ಸೋಲಿಗೆ ನಾನಾ ಕಾರಣಗಳನ್ನು ಹೇಳಿರಬಹುದು.. ಹನ್ನೊಂದರ ಬಳಗವನ್ನು ಸಮರ್ಥನೆ ಮಾಡಿಕೊಂಡಿರಬಹುದು.. ವಿರಾಟ್ ಕೊಹ್ಲಿಯ ನಾಯಕತ್ವವನ್ನು ಕೂಡ ಪ್ರಶ್ನೆ ಮಾಡಬಹುದು.. ಅದೇನೇ ಇರಲಿ.. ಸೋಲು ಗೆಲುವು ಆಟದಲ್ಲೇ ಇದ್ದದ್ದೇ.

ಆದ್ರೂ ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಮೂರು ದಾಖಲೆಗಳನ್ನು ನಿರ್ಮಿಸಿದ್ದಾರೆ. ತಂಡದ ನಾಯಕನಾಗಿ ಮಹತ್ವದ ಪ್ರಶಸ್ತಿ ಗೆಲ್ಲಲು ವಿಫಲರಾದ ವಿರಾಟ್ ಕೊಹ್ಲಿ ಕಪ್ತಾನನಾಗಿ, ಬ್ಯಾಟ್ಸ್‍ಮೆನ್ ಆಗಿ ವೈಯಕ್ತಿಕವಾಗಿ ಮೂರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಮೂರು ಮಾದರಿಯ ಐಸಿಸಿ ಟೂರ್ನಿಯ ಫೈನಲ್ ನಲ್ಲಿ ಆಡಿದ ಏಕೈಕ ಆಟಗಾರ

ಹೌದು, ಐಸಿಸಿ ಟೂರ್ನಿಯ ಮೂರು ಮಾದರಿಯ ಕ್ರಿಕೆಟ್ ಪಂದ್ಯದ ಫೈನಲ್ ನಲ್ಲಿ ಆಡಿದ ವಿಶ್ವದ ಮೊದಲ ಆಟಗಾರ ಎಂಬ ಗೌರವಕ್ಕೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

virat kohli team india saakshatv2008ರ 19 ವಯೋಮಿತಿ ವಿಶ್ವಕಪ್ ಕ್ರಿಕೆಟ್, 2011ರ ಏಕದಿನ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ, 2014ರ ಟಿ-ಟ್ವೆಂಟಿ ವಿಶ್ವಕಪ್ ಹಾಗೂ 2021ರ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್ ಫೈನಲ್ ನಲ್ಲಿ ವಿರಾಟ್ ಕೊಹ್ಲಿ ಆಡಿದ್ದಾರೆ. ಇದ್ರಲ್ಲಿ, 19 ವಯೋಮಿತಿ ವಿಶ್ವಕಪ್, 2011ರ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದ ತಂಡದಲ್ಲಿದ್ದರು. ನಾಯಕನಾಗಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪ್ರಶಸ್ತಿ ಗೆಲ್ಲಲು ವಿಫಲರಾಗಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ 7500 ರನ್ ದಾಖಲಿಸಿದ್ದ ಭಾರತದ ಆರನೇ ಆಟಗಾರ..!
ಇನ್ನು ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ 7500 ರನ್ ಗಳಿಸಿದ್ದ ಭಾರತದ ಆರನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ್ದ ವಿಶ್ವದ 42ನೇ ಬ್ಯಾಟ್ಸ್ ಮೆನ್ ಕೂಡ ಹೌದು. ಇನ್ನು ಒಂದು ವಿಶೇಷ ಅಂದ್ರೆ ಸುನೀಲ್ ಗವಾಸ್ಕರ್ ಮತ್ತು ವಿರಾಟ್ ಕೊಹ್ಲಿ 154 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದರು. ವಿರಾಟ್ ಕೊಹ್ಲಿ ಸದ್ಯ 92 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

virat kohli team india saakshatvಟೀಮ್ ಇಂಡಿಯಾದ ನಾಯಕನಾಗಿ ಅತೀ ಹೆಚ್ಚು ಪಂದ್ಯವನ್ನಾಡಿದ್ದ ಹಿರಿಮೆ ಈಗ ವಿರಾಟ್ ಕೊಹ್ಲಿಯವರದ್ದು..!
ಇನ್ನು ಟೀಮ್ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತೀ ಹೆಚ್ಚು ಪಂದ್ಯವನ್ನಾಡಿದ್ದ ಗೌರವಕ್ಕೂ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ ಇಲ್ಲಿಯವರೆಗೆ 61 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ಸಾಧನೆ ಮಾಡುವ ಮೂಲಕ ಧೋನಿಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಹಾಗೇ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ 15 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ, ಎರಡು ಶತಕ ಹಾಗೂ ಐದು ಅರ್ಧಶತಕಗಳ ಸಹಾಯದಿಂದ ಒಟ್ಟು 934 ರನ್ ಗಳಿಸಿದ್ದಾರೆ.

Tags: #saakshatv2008 under 19 wolrd cup2011 wolrd cup cricketchampions trophy 2013t-20 wolrdcup 2014team indiatest cricketvirat kohliWTC final
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram