WTC final: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶಿಸುವ ಕುರಿತಂತೆ ಕಳೆದೆರಡು ವಾರಗಳಿಂದ ಮೂಡಿದ್ದ ಕುತೂಹಲಕ್ಕೆ ಕಡೆಗೂ ತೆರೆಬಿದ್ದಿದೆ. ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಫಲಿತಾಂಶ ಹೊರ ಬೀಳುವ ಮೊದಲೇ ಟೀಂ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ಗೆ ಎಂಟ್ರಿಕೊಟ್ಟಿದೆ.
ಆಸ್ಟ್ರೇಲಿಯಾ ತಂಡ ಈಗಾಗಲೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶಿಸಿದ್ದು, ಎದುರಾಳಿ ತಂಡಕ್ಕಾಗಿ ಕಾಯುತ್ತಿತ್ತು. ಹೀಗಾಗಿ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಫೈನಲ್ ಸ್ಥಾನಕ್ಕಾಗಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಆದರೆ ನ್ಯೂಜಿ಼ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್‌ನಲ್ಲಿ ವಿರೋಚಿತ ಸೋಲನುಭವಿಸಿದ ಶ್ರೀಲಂಕಾ, ಫೈನಲ್ ರೇಸ್‌ನಿಂದ ಹೊರಬಿದ್ದಿದೆ.
ಹೀಗಾಗಿ ಟೀಂ ಇಂಡಿಯಾ ನೇರವಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ಗೆ ಸ್ಥಾನ ಪಡೆದುಕೊಂಡಿದೆ. ಉಭಯ ತಂಡಗಳು ಜೂನ್ 7ರಂದು ಲಂಡನ್‌ನ ಓವಲ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಭಾರತದ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಆ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶಿಸಿತ್ತು.
ಭಾರತ ತಂಡ ಈ ಹಿಂದೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2021ರಲ್ಲಿ ನಡೆದ ಚೊಚ್ಚಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್‌ಗೆ ಪ್ರವೇಶ ಪಡೆದಿತ್ತು. ಆದರೆ ನ್ಯೂಜಿ಼ಲೆಂಡ್ ವಿರುದ್ಧ ನಡೆದ ಫೈನಲ್‌ನಲ್ಲಿ ಸೋಲನುಭವಿಸುವ ಮೂಲಕ ಪ್ರಶಸ್ತಿ ಆಸೆಯನ್ನ ಕೈಚಲ್ಲಿತ್ತು. ಇದೀಗ ಎರಡನೇ ಬಾರಿಗೆ ಫೈನಲ್‌ಗೆ ಎಂಟ್ರಿಕೊಟ್ಟಿರುವ ಭಾರತ, ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ.
WTC final : Team India entered the ICC World Test Championship final