ಕೊರೋನಾ ವೈರಸ್ ಗೆ ವುಹಾನ್ ನ ಆಸ್ಪತ್ರೆಯ ನಿರ್ದೇಶಕರೇ ಅಸುನೀಗಿದ್ದಾರೆ. ಕೊರೊನಾ ವೈರಸ್ ನ ಮೂಲ ಸ್ಥಳವಾಗಿದ್ದ ವುಹಾನ್ ನಲ್ಲಿ ವುಚಾಂಗ್ ಆಸ್ಪತ್ರೆಯ ನಿರ್ದೇಶಕ ಮತ್ತು ವೈದ್ಯ ಲಿಯು ಝಿಮಿಂಗ್ ಅವರು ಸಾವನ್ನಪ್ಪಿದಾರೆ. ಅವರನ್ನು ರಕ್ಷಿಸುವ ಎಲ್ಲಾ ಪ್ರಯತ್ನವು ವಿಫಲವಾಗಿರುವುದಾಗಿ ಸ್ಟೇಟ್ ಬ್ರಾಡ್ ಕಾಸ್ಟರ್ ಸಿಸಿಟಿವಿ ವರದಿ ಮಾಡಿದೆ. ಈ ವೈರಸ್ ಗೆ ಈವರೆಗೆ 1900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 72 ಸಾವಿರ ಮಂದಿ ವೈರಸ್ ಗೆ ತುತ್ತಾಗಿದ್ದಾರೆ. ಇದೇ ವೇಳೆ ಹ್ಯುಬೆ ಪ್ರಾಂತ್ಯದಲ್ಲಿ ಮಂಗಳವಾರ 93 ಸಾವು ಮತ್ತು 1807 ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಚೀನಾದ ಹಲವು ವಿಮಾನಯಾನ ಸಂಸ್ಥೆಗಳು 78000 ವಿಮಾನಗಳ ಹಾರಾಟವನ್ನು ರದ್ದುಪಡಿಸಿವೆ.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್ಎಸ್ಎಸ್ ಸಹ ಒಪ್ಪಿಗೆ...








