Xi jinping | ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಜಿನ್ ಪಿಂಗ್ ಮರು ಆಯ್ಕೆ
ಬೀಜಿಂಗ್ : ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಚೀನಾದ ಆಡಳಿತಾರೂಢ ಕಮ್ಯುಜಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ದಾಖಲೆಯ ಮೂರನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ.
ಪಕ್ಷದ ಅಧಿಕೃತ ನಿವೃತ್ತಿಯ ವಯಸ್ಸು 68 ವರ್ಷ ಆಗಿದೆ. ಆದರೂ 69 ವರ್ಷದ ಜಿನ್ ಪಿಂಗ್ ಈಗಾಗಲೇ 10 ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದೆ.

ಇದೀಗ ಮತ್ತೆ ಐದು ವರ್ಷದ ಅವಧಿಗೆ ಕಾಂಗ್ರೆಸ್ ನಿಂದ ಪ್ರಬಲ ಕೇಂದ್ರ ಸಮಿತಿಗೆ ಆಯ್ಕೆ ಆಯ್ಕೆಯಾಗಿದ್ದಾರೆ.
ಚೀನಾದಲ್ಲಿ ಕ್ಸಿ ಜಿನ್ ಪಿಂಗ್ ವಿರುದ್ಧ ಜನರು ಆಕ್ರೋಶಗೊಂಡಿದ್ದು, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಹುವಂತೆ ಒತ್ತಡ ಹಾಕಲಾಗಿದೆ ಎಂದು ವರದಿಗಳು ಬರುತ್ತಿವೆ.
ಆದ್ರೂ ಮೂರನೇ ಅವಧಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಜಿನ್ ಪಿಂಗ್ ಪಕ್ಷದ ಸಂಸ್ಥಾಪಕ ಮಾವೋ ಝೆಡಾಂಗ್ ನಂತರದ ಅತ್ಯಂತ ಶಕ್ತಿಶಾಲಿ ನಾಯಕರಾಗಿದ್ದಾರೆ.








