ವಿಶ್ವದಲ್ಲೇ ನಂಬರ್ 2 ಪಟ್ಟಕ್ಕೆ ಏರಿದ ಕ್ಸಿಯೋಮಿ ಸ್ಮಾರ್ಟ್ ಫೋನ್..!
ಚೀನಾ : ವಿಶ್ವದ ಸ್ಮಾರ್ಟ್ಫೋನ್ ಚೀನಾ ಮೂಲದ ಕ್ಸಿಯೋಮಿ ಅಥವ MI ತನ್ನ ಪ್ರಾಬಲ್ಯವನ್ನ ದಿನೇ ದಿನೇ ಹೆಚ್ಚಿಸಿಕೊಳ್ತಿದೆ.. ಇದೀಗ ಆಪಲ್ ಕಂಪನಿಯನ್ನೂ ಕೂಡ ಇದು ಹಿಂದಕ್ಕೆ ಇಟ್ಟಿದೆ.. ಹೌದು ಜಾಗತಿಕ ಮಾರುಕಟ್ಟೆಯಲ್ಲಿ ಆಪಲ್ ಕಂಪನಿಯನ್ನು ಸೋಲಿಸಿ ಕ್ಸಿಯೋಮಿ ನಂಬರ್ 2 ಪಟ್ಟಕ್ಕೆ ಏರಿದೆ. ಅಂದ್ಹಾಗೆ ಮೊದಲನೇ ಸ್ಥಾನದಲ್ಲಿ ದಕ್ಷಿಣ ಕೊರಿಯಾ ಮೂಲದ ಸ್ಯಾಮ್ ಸಂಗ್ ಸ್ಥಾನ ಪಡೆದುಕೊಂಡಿದೆ..
ಕ್ಸಿಯೋಮಿ ನಂತರ ಆಪಲ್ ಕಂಪನಿಯಿದೆ, Canalys ಸಂಸ್ಥೆ ವಿಶ್ವದ ಸ್ಮಾರ್ಟ್ಫೋನ್ ಮಾರುಕಟ್ಟೆಯನ್ನು ಅಧ್ಯಯನ ಮಾಡಿ ಈ ವರದಿಯನ್ನು ಪ್ರಕಟಿಸಿದೆ. 2ನೇ ತ್ರೈಮಾಸಿಕದಲ್ಲಿ ವಿಶ್ವದ ಸ್ಮಾರ್ಟ್ಫೋನ್ ಮಾರುಕಟ್ಟೆ ಶೇ. 12ರಷ್ಟು ಪ್ರಗತಿ ಸಾಧಿಸಿದೆ.
ವಿಶ್ವದ ಮಾರುಕಟ್ಟೆಯಲ್ಲಿ ಆಪಲ್ ಶೇ.14ರಷ್ಟು ಪಾಲನ್ನು ಹೊಂದಿದ್ದರೆ, ಕ್ಸಿಯೋಮಿ ಶೇ.17ರಷ್ಟು ಪಾಲನ್ನು ಹೊಂದಿದೆ. ಸ್ಯಾಮ್ಸಂಗ್ ಶೇ.19ರಷ್ಟು ಪಾಲನ್ನು ಹೊಂದುವ ಮೂಲಕ ಮೊದಲ ಸ್ಥಾನದಲ್ಲೇ ಮುಂದುವರಿದಿದೆ.
ವರ್ಷದಿಂದ ವರ್ಷಕ್ಕೆ ಕ್ಸಿಯೋಮಿ ಮಾರುಕಟ್ಟೆ ಪಾಲು ಹೆಚ್ಚಾಗುತ್ತಿದೆ. ಕ್ಸಿಯೋಮಿ ಶೇ.83ರಷ್ಟು ಬೆಳವಣಿಗೆ ಸಾಧಿಸಿದರೆ ಸ್ಯಾಮ್ಸಂಗ್ ಶೇ.15, ಆಪಲ್ ಶೇ.1 ರಷ್ಟು ಪ್ರಗತಿ ಸಾಧಿಸಿದೆ. ಚೀನಾದ ಒಪ್ಪೋ ಮತ್ತು ವಿವೋ ಕಂಪನಿಗಳು ಕ್ರಮವಾಗಿ 4 ಮತ್ತು 5ನೇ ಸ್ಥಾನವನ್ನು ಪಡೆದುಕೊಂಡಿದೆ.
ಕಡಿಮೆ ಬೆಲೆಯ ಮತ್ತು ಮಿಡ್ ರೇಂಜ್ ಫೋನ್ ಮಾರಾಟದಿಂದ ಕ್ಸಿಯೋಮಿ ಈ ಸಾಧನೆ ಮಾಡಿದೆ. ಎರಡನೇ ಸ್ಥಾನಕ್ಕೆ ಏರಿದ್ದರೂ ಆಪಲ್ ಫೋನ್ ಗಳಿಗೆ ಹೋಲಿಸಿದರೆ ಕ್ಸಿಯೋಮಿ ಫೋನ್ ಶೇ.75ರಷ್ಟು ಬೆಲೆ ಕಡಿಮೆಯಿದೆ.
ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಮಾರುಕಟ್ಟೆಯನ್ನು ಗುರಿಯಾಗಿಸಿ ಫೋನ್ ತಯಾರಿಸುತ್ತಿದ್ದ ಕ್ಸಿಯೋಮಿ ಈಗ ಯುರೋಪ್ ಮತ್ತು ಅಮೆರಿಕನ್ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಎಂಐ 11 ಆಲ್ಟ್ರಾ, ಎಂಐ ಮಿಕ್ಸ್ ಫೋಲ್ಡ್ ಫೋನ್ ಬಿಡುಗಡೆ ಮಾಡಿದೆ.
ವಿಶ್ವದ ಸ್ಮಾರ್ಟ್ಫೋನ್ ಕಂಪನಿಗಳಲ್ಲಿ ಒಂದಾಗಿದ್ದ ಹುವಾವೇ ಮೇಲೆ ಅಮೆರಿಕ ನಿಷೇಧ ವಿಧಿಸಿದ್ದು ಕ್ಸಿಯೋಮಿಗೆ ವರದಾನವಾಗಿದೆ. ಸಾಫ್ಟ್ ವೇರ್ ಮತ್ತು ಚಿಪ್ ಪೂರೈಕೆಗೆ ತಡೆಯಾಗಿದ್ದರಿಂದ ಹುವಾವೇ ಸ್ಪರ್ಧೆಯಿಂದ ಹಿಂದೆ ಸರಿದರೆ ಕ್ಸಿಯೋಮಿ ನಿಧನವಾಗಿ ಬೆಳವಣಿಗೆಯಾಗಿ ಈಗ ವಿಶ್ವದ ಎರಡನೇ ದೊಡ್ಡ ಸ್ಮಾರ್ಟ್ಫೋನ್ ಕಂಪನಿಯಾಗಿ ಹೊರಹೊಮ್ಮಿದೆ.
ಆಗಸ್ಟ್ ಅಂತ್ಯ ಕೋವಿಡ್ 3ನೇ ಅಲೆ ಸಾಧ್ಯತೆ: ಐಸಿಎಂಆರ್ ಎಚ್ಚರಿಕೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.