ಒಡಿಶಾದ ಬಾಲಾಸೋರ್ ಗೆ ಅಪ್ಪಳಿಸಲಿದೆ ‘ಯಸ್’ ಚಂಡಮಾರುತ
ಇತ್ತೀಚೆಗೆ ದೇಶ ಹಾಗೂ ರಾಜ್ಯದ ಕರಾವಳಿ ಭಾಗಗಳಲ್ಲಿ ತೌಕ್ತೇ ಚಂಡಮಾರುತ ಅಪ್ಪಳಿಸಿ, ಸಾಕಷ್ಟು ಹಾನಿಗಳನ್ನ ಉಂಟುಮಾಡಿದೆ. ಇದ್ರಿಂದ ಹೆಚ್ಚಾಗಿ ಮಹಾರಾಷ್ಟ್ರ ಗುಜರಾತ್ ಗೆ ಹಾನಿಯಾಗಿದ್ದು, ಅನೇಕರು ಮೃತಪಟ್ಟಿದ್ದಾರೆ.. ಇದರ ಬೆನ್ನಲ್ಲೇ ಮತ್ತೊಂದು ಚಂಡಮಾರುತದ ಆತಂಕ ಎದುರಾಗಿದೆ.
ಹಿಂದೂ ಮಹಾಸಾಗರದಲ್ಲಿ ಸೃಷ್ಟಿಯಾಗಿರುವ ‘ಯಸ್’ ಚಂಡಮಾರುತವು ಮೇ 26 ರ ಬುಧವಾರ ಮಧ್ಯಾಹ್ನದ ವೇಳೆಗೆ ಉತ್ತರ ಒಡಿಶಾದ ಬಾಲಾಸೋರ್ ನಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಸಿದೆ.
ಚಂಡಮಾರುತವು ಒಡಿಶಾದ ಪಾರಾದೀಪ್ ಹಾಗೂ ಪಶ್ಚಿಮ ಬಂಗಾಳದ ಸಾಗರ ದ್ವೀಪವನ್ನು ದಾಟಿ ಹೋಗಲಿದೆ. ಪಶ್ಚಿಮ ಬಂಗಾಳದ ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲೂ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎನ್ನಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಕೋಲ್ಕತ್ತ ಬಂದರಿನಲ್ಲಿ ಎಲ್ಲಾ ಚಟುವಟಿಕೆಗಳನ್ನೂ ಸ್ಥಗಿತಗೊಳಿಸಲಾಗಿದೆ. ಹಡಗುಗಳ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ. ಕಾರ್ಮಿಕರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ.
ಇನ್ನೂ ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ಹೋಗಿದ್ದ ಎಲ್ಲಾ 265 ಬೋಟ್ಗಳು ಈಗಾಗಲೇ ತೀರಕ್ಕೆ ಮರಳಿವೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ. ಒಡಿಶಾ ಸರ್ಕಾರವು ರಕ್ಷಣೆ ಹಾಗೂ ಪರಿಹಾರ ತಂಡಗಳನ್ನು ಬಾಲಾಸೋರ್ ಜಿಲ್ಲೆಗೆ ಕಳುಹಿಸಿದೆ. ತಗ್ಗು ಪ್ರದೇಶದಲ್ಲಿರುವವರು ಮತ್ತು ಚಂಡಮಾರುತದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸುವ ಕೆಲಸ ಆರಂಭಿಸಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








