‘ಯಾಸ್’ ಚಂಡಮಾರುತ : ‘ಪಶ್ಚಿಮ ಬಂಗಾಳದಲ್ಲಿ ಇಬ್ಬರು ಸಾವು, 1 ಕೋಟಿ ಜನರಿಗೆ ತೊಂದರೆ’
ತೌಕ್ತೇ ಚಂಡಮಾರುತ ಅನಾಹುತ ಸೃಷ್ಟಿ ಮಾಡಿದ ಬೆನ್ನಲ್ಲೇ ಇದೀಗ ಯಾಸ್ ಚಂಡಮಾರುತ ಅಪ್ಪಳಿಸಿದ್ದು, ಚಂಡಮಾರುತದ ಹೊಡೆತಕ್ಕೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಹಾಗೂ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ಮನೆ ಕುಸಿದು ಒಬ್ಬರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ ಯಸ್ ಚಂಡಮಾರುತದಿಂದ 1 ಕೋಟಿ ಜನರಿಗೆ ತೊಂದರೆಯಾಗಿದೆ. 3 ಲಕ್ಷ ಮನೆಗಳಿಗೆ ಹಾನಿಯಾಗಿದೆ. 20 ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ಅವರೂ ಸಹ ಸಂತ್ರಸ್ತರ ಪಟ್ಟಿಗೆ ಬರಲಿದ್ದಾರೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.