ಯಾದಗಿರಿ: ಯಾದಗಿರಿಯ ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೆಕ್ಕ ಪರಿಶೋಧನಾಧಿಕಾರಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿರುವ ಲೆಕ್ಕ ಪರಿಶೋಧನ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಲೆಕ್ಕ ಪರಿಶೋಧನ ಅಧಿಕಾರಿ ರವಿಕುಮಾರ್ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಕೈಗೆ ತಗಲಾಕಿಕೊಂಡಿದ್ದಾರೆ.
ವಾರ್ಷಿಕ ಲೆಕ್ಕ ಪರಿಶೋಧನೆ ಮಾಡುವ ವಿಚಾರವಾಗಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪಸಪುಲ್ ಪಂಚಾಯಿತಿ ಪಿಡಿಒ ಮಲ್ಲಣ್ಣ ಬಳಿ ರವಿಕುಮಾರ್ 40 ಸಾವಿರ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಆ ಪೈಕಿ 30 ಸಾವಿರ ರೂಪಾಯಿ ಹಣ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣನವರ್ ಅವರ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆದಿದೆ.








