Yakshagana:ಯಕ್ಷಗಾನ ಲೋಕದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ
ಯಕ್ಷಗಾನ ಮತ್ತು ತಾಳ-ಮದ್ದಳೆ ಹಿರಿಯ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ತಮ್ಮ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಕುಂಬ್ಳೆ ಸುಂದರ್ ರಾವ್ ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಮಂಗಳೂರಿನ ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು , ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಆಪ್ತರಿಂದ ತಿಳಿದು ಬಂದಿದೆ.
1934ನೇ ಮಾರ್ಚ್ 20ರಂದು ಕುಂಬ್ಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್, ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿಗಳ ಸುಪುತ್ರರು.
ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯನಿರ್ವಹಿಸಿದ್ದ ಅವರು 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಸುಂದರ್ ರಾವ್ ಅವರು ಪತ್ನಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.
Yakshagana: Kumble Sundar Rao, the iconic artist of the world of Yakshagana, is no more