ಹುಬ್ಬಳ್ಳಿ: ನವೆಂಬರ್ 3ರಂದು ನಡೆಯುವ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಗೆ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ ಹಾಗೂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಭ್ರಷ್ಟಾಚಾರದ ಬಗ್ಗೆ ಡಿ.ಕೆ ಶಿವಕುಮಾರ್ ಮಾತನಾಡುವುದು ಹಾಸ್ಯಾಸ್ಪದ. ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಡಿಕೆಶಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಮೊದಲು ಅದನ್ನ ಡಿಕೆಶಿ ಅರಿತುಕೊಳ್ಳಲಿ. ಇದು ಕಾಂಗ್ರೆಸ್ಸಿಗರ ದೊಡ್ಡ ಸಮಸ್ಯೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪುಲ್ವಾಮಾ ದಾಳಿ ಕುರಿತು ಕಾಂಗ್ರೆಸ್ ಪಕ್ಷದವರು ಸಾಕ್ಷಿ ಕೇಳಿದ್ದರು. ಪುಲ್ವಾಮಾ ದಾಳಿ ನಡೆದ ಬಗ್ಗೆ ಪಾಕಿಸ್ತಾನ ಪಾರ್ಲಿಮೆಂಟ್ ನಲ್ಲಿ ಅಲ್ಲಿನ ಸಚಿವರೊಬ್ಬರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಪಾಕಿಸ್ತಾನದವರೇ ಕಾಂಗ್ರೆಸಿಗರಿಗೆ ಉತ್ತರ ಕೊಟ್ಟಿದ್ದಾರೆ. ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆ ಮಾಡುತ್ತಿದೆ ಅಂತ ಜಾಗತಿಕ ವೇದಿಕೆಯಲ್ಲಿ ನಾವು ಹೇಳುತ್ತಿದ್ದೆವು. ಈಗ ಅವರೇ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡೋದಾಗಿ ಒಪ್ಪಿಕೊಂಡಿದ್ದಾರೆ. ಭಾರತ ದೇಶ ಸಾಕಷ್ಟು ಸದೃಢ ಎಂಬುದು ಪಾಕಿಸ್ತಾನಕ್ಕೆ ತಿಳಿದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಯುರೋಪ್ ರಾಷ್ಟಗಳಲ್ಲಿ ಮತ್ತೆ ಲಾಕ್ಡೌನ್ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಭಾರತ ದೇಶದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾವ ಇಲ್ಲ. ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ನಾವು ಸಕಲ ಸಿದ್ಧತೆಯಲ್ಲಿದ್ದೇವೆ. ಹೀಗಾಗಿ ನಮ್ಮ ದೇಶದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದರು.
ಡಿಕೆಶಿ, ಕಾಂಗ್ರೆಸ್ಗೆ ಸೋಲಿನ ಭೀತಿ…!
ಜೋಡೆತ್ತು ಬರಲಿ.. ಯಾರೆ ಬರಲಿ, ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ, ಎರಡು ಕ್ಷೇತ್ರಗಳಲ್ಲಿ ಮುಖ್ಯಮಂತ್ರಿಗಳು ಪ್ರಚಾರಕ್ಕೆ ಹೋಗುತ್ತಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಈಗಾಗಲೇ ಬಿಜೆಪಿ ಗೆದ್ದಿದೆ, ಎಷ್ಟು ಅಂತರದಿಂದ ಗೆಲ್ತೀವಿ ಅನ್ನೋದಷ್ಟೇ ನೋಡ್ತಿದ್ದೀವಿ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ಗೆ ಸೋಲಿನ ಭೀತಿ ಶುರುವಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ, ಹೀಗಾಗಿ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಡಿಕೆಶಿ ಹೇಳುತ್ತಿದ್ದಾರೆ. ಹಾಗಾದ್ರೆ ಡಿಕೆಶಿ ಬಳಿ ಹಣ ಇಲ್ವಾ, ನಯಾಪೈಸೆ ಖರ್ಚು ಮಾಡದೆ ಡಿಕೆಶಿ ಚುನಾವಣೆ ಮಾಡ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel