ಏಪ್ರಿಲ್ 14ಕ್ಕೆ ಥಿಯೇಟರ್ ಗೆ ಬರ್ತಾನೆ `ಮಾನ್ ಸ್ಟರ್’ kgf-2 saaksha tv
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆಜಿಎಫ್ ಚಾಪ್ಟರ್ 2 ಸಿನಿಮಾಗಾಗಿ ಕಾದುಕುಳಿತಿರುವ ಸಿನಿಮಾ ರಸಿಕರಿಗೆ ಸಿಹಿ ಸುದ್ದಿ ದೊರಕಿದೆ. ಕೊನೆಗೂ ಥೆಯೇಟರ್ ಗೆ ಮಾನ್ ಸ್ಟರ್ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ.
ಅಂದ್ರೆ ಭಾರತೀಯ ಸಿನಿಮಾ ರಂಗದ ಬಹುನಿರೀಕ್ಷೆಯ ಸಿನಿಮಾ ಕೆಜಿಎಫ್ ಚಾಪ್ಟರ್ 2 ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಮುಂದಿನ ವರ್ಷ ಏಪ್ರಿಲ್ 14 ರಂದು ರಾಖಿಬಾಯ್ ಪ್ರೇಕ್ಷಕರಿಗೆ ದರ್ಶನ ಕೊಡಲಿದ್ದಾನೆ.
ಈ ಬಗ್ಗೆ ನಟ ಯಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಇಂದಿನ ಅನಿಶ್ಚಿತತೆಗಳು ನಮ್ಮ ನಿರ್ಧಾರಗಳನ್ನು ಬದಲಿಸುತ್ತವೆ. ಆದ್ರೆ ಭರವಸೆಯಂತೆ ನಾವು 2022 ಏಪ್ರಿಲ್ 14 ರಂದು ಥಿಯೇಟರ್ ಗೆ ಬರಲಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ.









