ಸ್ಟಾರ್ ನಟ ಯಶ್ ಸದ್ಯ ‘ಟಾಕ್ಸಿಕ್’ (Toxic) ಸಿನಿಮಾ ಶೂಟಿಂಗ್ ನಲ್ಲಿ ಸಖತ್ ಬ್ಯೂಸಿಯಾಗಿದ್ದಾರೆ. ಈ ಮಧ್ಯೆ ಅವರು ರಾವಣನಾಗಿಯೂ ಮಿಂಚಲು ಸಿದ್ಧರಾಗಿದ್ದಾರೆ.
ಟಾಕ್ಸಿಕ್ ಜೊತೆ ಯಶ್ ‘ರಾಮಾಯಣ’ ಚಿತ್ರದಲ್ಲಿಯೂ ನಟಿಸಲಿದ್ದಾರೆ ಎಂಬ ಅಪ್ಡೇಟ್ ವೊಂದು ಸಿಕ್ಕಿದೆ. ಡಿಸೆಂಬರ್ ನಲ್ಲಿ ಯಶ್ (Yash) ‘ರಾಮಾಯಣ’ದ ರಾವಣನಾಗಲಿದ್ದಾರೆ ಎಂದು ಚಿತ್ರ ತಂಡ ಹೇಳಿದೆ.
ಈಗ ನಟ ಯಶ್ ಟಾಕ್ಸಿಕ್ ಸಿನಿಮಾದ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರು ಟಾಕ್ಸಿಕ್ ಗಾಗಿ ಬ್ಯೂಸಿಯಾಗಿದ್ದಾರೆ. ಹಲವು ಹಂತದಲ್ಲಿ ಈ ಚಿತ್ರದ ಶೂಟಿಂಗ್ ನಡೆಯಬೇಕಿದೆ. ಆದರೆ ರಣ್‌ಬೀರ್ ಕಪೂರ್ (Ranbir Kapoor) ‘ರಾಮಾಯಣ’ (Ramayana) ಚಿತ್ರದಲ್ಲಿ ಯಶ್ ‘ರಾವಣ’ನಾಗಿ ಬರುವುದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ಜೊತೆಗೆಯೇ ಈ ಚಿತ್ರಕ್ಕೂ ಅವರು ಸಾಥ್ ನೀಡಲಿದ್ದಾರೆ.
ಈ ಮಧ್ಯೆ ರಾಮಾಯಣ ಚಿತ್ರವನ್ನು ಕೂಡ ಯಶ್ ಒಪ್ಪಿಕೊಂಡಿದ್ದು, ಡಿಸೆಂಬರ್ ನಿಂದ ಈ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಚಿತ್ರದಲ್ಲಿ ರಣಬೀರ್ ರಾಮನ ಪಾತ್ರ, ಸಾಯಿ ಪಲ್ಲವಿ (Sai Pallavi) ಸೀತೆ ಪಾತ್ರಕ್ಕೆ ಜೀವತುಂಬುತ್ತಿದ್ದಾರೆ. ಈಗ ಅವರ ಭಾಗದ ಶೂಟಿಂಗ್ ನಡೆಯುತ್ತಿದೆ. ಯಶ್ ಪಾತ್ರದ ಚಿತ್ರೀಕರಣ ಡಿಸೆಂಬರ್ ನಿಂದ ಆರಂಭವಾಗಲಿದೆ ಎನ್ನಲಾಗುತ್ತಿದೆ. ರಾವಣನಾಗಿ ಘರ್ಜಿಸಲು ಈಗ ಯಶ್ ಸಿದ್ಧರಾಗಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಫ್ಯಾನ್ಸ್ ಈ ಸುದ್ದಿ ಕೇಳಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಫ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.