ಅಕ್ಟೋಬರ್ ನಿಂದ ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಜಾರಿ
ಮಡಿಕೇರಿ : ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅಕ್ಟೋಬರ್ ನಿಂದ ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಜಾರಿ ಮಾಡಲು ನಿರ್ಧರಿಸಿದೆ.
ಈ ಸಂಬಂಧ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ.
ಕುಶಾಲನಗರದಲ್ಲಿ ಮಾತನಾಡಿದ ಸೋಮಶೇಖರ್, ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತಿಸಲಾಗಿದೆ.
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ ಇದೇ ವೇಳೆ ಸಚಿವರು ಮಾಹಿತಿ ನೀಡಿದರು.