Yashoda Teaser: ಸಮಂತ ನಟನೆಯ ಯಶೋಧ ಟೀಸರ್ ಬಿಡುಗಡೆ..
‘ಫ್ಯಾಮಿಲಿ ಮ್ಯಾನ್ 2’ ವೆಬ್ ಸೀರೀಸ್ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದ ಸಮಂತಾ ಪತಿ ನಾಗ ಚೈತನ್ಯ ಜೊತೆಗಿನ ವಿಚ್ಛೇದನ ಕಾರಣಕ್ಕೆ ಸುದ್ದಿಯಾಗಿದ್ದು ಗೊತ್ತೇ ಇದೇ. ಇದಲ್ಲದೇ ಸಮಂತ ಪೋಸ್ಟ್ ಮಾಡುವ ಪೋಟೋ ಮತ್ತು ವಿಡಿಯೋಗಳಿಂದ ಸೋಶೀಯಲ್ ಮಿಡಿಯಾಗಳಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ.
ಆದರೆ ಸಮಂತಾ ನಟನೆಯ ಸಿನಿಮಾಗಳಿಂದ ಒಂದೇ ಒಂದು ಅಪ್ಡೇಟ್ ಸಿಕ್ಕಿರಲಿಲ್ಲ. ಇದೀಗ ಸಮಂತಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಯಶೋಧಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಶ್ರೀದೇವಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಶಿವಲೆಂಕ ಕೃಷ್ಣಪ್ರಸಾದ್ ಯಶೋಧ ಚಿತ್ರವನ್ನ ನಿರ್ಮಿಸಿದ್ದಾರೆ. ಹರಿ – ಹರೀಶ್ ಈ ಚಿತ್ರದ ನಿರ್ದೇಶಕರು. ವರಲಕ್ಷ್ಮಿ ಶರತ್ ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮಾ ಮತ್ತು ಸಂಪತ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ತಯಾರಿ ನಡೆಸಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ಟೀಸರ್‌ಗೆ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಟೀಸರ್ ನಲ್ಲಿ ಸಮಂತಾ ಗರ್ಭಿಣಿ ಪಾಸತ್ರದಲ್ಲಿ ನಟಿಸುತ್ತಿದ್ದಾರೆ. ವೈದ್ಯರು ಯಾವುದನ್ನು ಬೇಡ ಎಂದು ಸಲಹೆ ನೀಡಿರುತ್ತಾರೋ ಅದೆಲ್ಲವೂ ರಿವರ್ಸ್ ಆಗಿ ಸಮಂತಾ ಜೀವನದಲ್ಲಿ ನಡೆಯುತ್ತಿರುವುದನ್ನ ನೊಡಬಹುದು. ಟೀಸರ್ ಬಿಡುಗಡೆಯಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ನಿಜ ಜೀವನಕ್ಕೆ ತುಂಬಾ ಹತ್ತಿರವಾಗಿದೆ ಎಂಬ ಕಮೆಂಟ್ ಗಳು ಹರಿದಾಡುತ್ತಿವೆ.








