ಇಂದು ನಟ ಯಶ್ (Yash) ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ಈ ದಿನವನ್ನು ಸಂಭ್ರಮದಿಂದ ಆಚರಿಸಲು ಮುಂದಾಗಿದ್ದರು. ಆದರೆ, ಈ ವೇಳೆ ದುರ್ಘಟನೆಯೊಂದು ನಡೆದಿದ್ದು, ವಿದ್ಯುತ್ ಶಾಕ್ ನಿಂದಾಗಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಸದ್ಯ ಈ ಕುಟುಂಬಗಳಿಗೆ ಯಶ್ ಸಾಂತ್ವನ ಹೇಳಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದ್ದಾದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಟ ಯಶ್ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾಂತ್ವನ ಹೇಳಬೇಕೆಂಬ ಆಗ್ರಹ ಕೇಳಿ ಬರುತ್ತಿದೆ. ಘಟನೆಯಲ್ಲಿ ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಸಾವನ್ನಪ್ಪಿದ ದುರ್ದೈವಿಗಳು. ಅಲ್ಲದೇ, ಇನ್ನೂ ಮೂವರು ಯುವಕರು ಗಾಯಗೊಂಡಿದ್ದಾರೆ.
ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಸೂರಣಗಿ ಗ್ರಾಮಕ್ಕೆ ಯಶ್ ಬಂದು ಸಾಂತ್ವನ ಹೇಳಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.








