ರಾಷ್ಟ್ರಪತಿ ಚುನಾವಣೆ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ….
ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವನೆಗೆ ವಿರೋಧ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಯಶವಂತ್ ಸಿನ್ಹಾ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಚುನಾವಣಾಧಿಕಾರಿಯಾಗಿರುವ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಅವರಿಗೆ ನಾಲ್ಕು ಸೆಟ್ ನಾಮಪತ್ರಗಳನ್ನ ಸಲ್ಲಿಸಿದ್ದಾರೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಡಿಎಂಕೆಯ ಎ ರಾಜಾ ಮತ್ತು ಎನ್‌ಸಿ ನಾಯಕ ಫಾರೂಕ್ ಅಬ್ದುಲ್ಲಾ ಸೇರಿದಂತೆ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರು ಸಿನ್ಹಾ ನಾಮಪತ್ರ ಸಲ್ಲಿಸಿದಾಗ ಹಾಜರಿದ್ದರು.
ಜೂನ್ 21 ರಂದು ರಾಷ್ಟ್ರಪತಿ ಚುನಾವಣೆಗೆ ಸಿನ್ಹಾ ಅವರನ್ನು ಸಾಮಾನ್ಯ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಹೆಸರಿಸಲಾಯಿತು. NDA ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಈಗಾಗಲೇ ಕಳೆದ ವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಮುಂದಿನ ರಾಷ್ಟ್ರಪತಿಗಳ ಆಯ್ಕೆಗೆ ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ಈ ಚುನಾವಣೆಯಲ್ಲಿ, ಸಂಸದರು ಮತ್ತು ಶಾಸಕರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ 4,809 ಸದಸ್ಯರು ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಬಲವನ್ನು ಗಮನಿಸಿದರೆ, ಮುಂಬರುವ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯ ಗೆಲುವನ್ನ ಸುಲಭವಾಗಿ ಖಚಿತಪಡಿಸಿಕೊಳ್ಳುವ ಸ್ಥಿತಿಯಲ್ಲಿ ಪಕ್ಷ ಇದೆ.