ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಿಡಿಸಿದ ಸಿಡಿ ಬಾಂಬ್ಗೆ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಸ್ವಪಕ್ಷೀಯರೇ ನೀಡುತ್ತಿರುವ ಬಹಿರಂಗ ಹೇಳಿಕೆಗೆ ಬಿಜೆಪಿಗೆ ತೀವ್ರ ಮುಜುಗರ ಸೃಷ್ಟಿಸಿದ್ದು, ಇನ್ನುಮುಂದೆ ಯಾವುದೇ ಶಾಸಕ ಸೇರಿದಂತೆ ಮುಖಂಡರು ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ಕಟ್ಟಪಣೆ ಮಾಡುವ ಮೂಲಕ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ.
ಯತ್ನಾಳ್ ಹೇಳಿಕೆ ಬಿಜೆಪಿ ಹಾಗೂ ಸ್ವತಃ ಸಿಎಂ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸಂಬಂಧ ಪಕ್ಷದ ಎಲ್ಲಾ ಶಾಸಕರಿಗೆ ಸೂಚನೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಸಿಡಿ ವಿಚಾರದ ಬಗ್ಗೆ ಯಾವ ಶಾಸಕರೂ ಬಹಿರಂಗ ಹೇಳಿಕೆ ನೀಡಬಾರದು. ಹೇಳಿಕೆ ನೀಡಿದರೆ ಸೂಕ್ತ ಶಿಸ್ತುಕ್ರಮ ಜರುಗಿಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.
ಕಟೀಲ್ ಸೂಚನೆ ಬಂದ ಬೆನ್ನಲ್ಲೇ, ಸಿಡಿ ವಿಚಾರದ ಬಗ್ಗೆ ಯಾವೊಬ್ಬ ಶಾಸಕ, ಮುಖಂಡರು ತುಟಿ ಬಿಚ್ಚುತ್ತಿಲ್ಲ. ಈ ವಿಚಾರದಲ್ಲಿ ಸಚಿವರು ಕೂಡ ಮೌನದ ಮೊರೆ ಹೋಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel