ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗುರವಾಗಿ ಮಾತನಾಡಿದ್ದಾರೆ.
ನಗರದಲ್ಲಿ ಮಾತನಾಡಿರುವ ಅವರು, ಯತ್ನಾಳ್ (Basangouda Patil Yatnal) ವಿರುದ್ಧ ದೂರು ನೀಡಲ್ಲ ಎಂದಿದ್ದ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಶಕುನಿ ಇದ್ದ ಹಾಗೆ. ಅವರು ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ, ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ.
ಆಗ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲು ನಮ್ಮ ವಿರೋಧ ಇಲ್ಲ ಎಂದಿದ್ದರು. ಅವರು ನನ್ನ ವಿರುದ್ಧ ದೂರು ನೀಡಿದ್ದಾರೆ. ಈಗ ಗೌರವ ಹಾಳಾಗುತ್ತದೆ ಎಂದು ಈ ರೀತಿ ಹೇಳುತ್ತಿದ್ದಾರೆ. ಅವರು ಶಕುನಿ ರೀತಿ ಆಡುತ್ತಿದ್ದಾರೆ ಎಂದು ಹೇಳಿದ್ದಾರೆ.