ಯಡಿಯೂರಪ್ಪ ಡಿ ಜೀರೋ ಸಿಎಂ : ಸಿದ್ದರಾಮಯ್ಯ ಗುಡುಗು Siddaramaiah
ದಾವಣಗೆರೆ : ವಿಜಯೇಂದ್ರನೇ ಡಿ ಫ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಸರ್ಕಾರ 20-25 ಪಸೆರ್ಂಟ್ ಸರ್ಕಾರ. ಲಂಚ ಇಲ್ಲದೆ ಏನೂ ಆಗುತ್ತಿಲ್ಲ. ರಾಜ್ಯ ಸರ್ಕಾರ ಭ್ರಷ್ಟಚಾರ ಮಾಡುತ್ತಿರುವುದು ಸತ್ಯ. ಯಡಿಯೂರಪ್ಪ ಅವರ ಮಗ ಹಾಗೂ ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದುಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರದಲ್ಲಿ ಲಂಚ ಇರುವುದು ಸತ್ಯ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಇದೇ ವೇಳೆ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂಬ ಹೆಚ್ ಡಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ಸುಳ್ಳು ಹೇಳ್ತಾ ಹೋಗ್ತಾರೆ. ಅವರೇನು ನಮ್ಮ ಪಕ್ಷದವರಾ..? ಅವರು ಹೇಳಿದ್ದೆಲ್ಲ ವೇದವಾಕ್ಯ ಅಲ್ಲ ಎಂದರು.