ಮೈಸೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ದಮ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪಗೆ ದಮ್ ಇಲ್ಲ. ಅದಕ್ಕೆ ಕೇಂದ್ರದಿಂದ ಬರಬೇಕಾದ ಹಣ ತರಿಸಲು ಸಾಧ್ಯವಾಗುತ್ತಿಲ್ಲ. ಮೋದಿ ಹೇಳಿದ ರೀತಿ ಡ್ಯಾನ್ಸ್ ಮಾಡುತ್ತಾರೆ. ಯಡಿಯೂರಪ್ಪಗೆ ದಮ್ ಇದ್ದರೆ ನಮಗೆ ಬರಬೇಕಾದ ಹಣ ಎಲ್ಲ ಬರುತಿತ್ತು ಎಂದು ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇದೆ ವೇಳೆ ಮಾತು ಮುಂದುವರಿಸಿದ ಅವರು, ಎಪಿಎಂಸಿ ಹಾಗೂ ಭೂ ಸುಧಾರಣೆ ಕಾಯ್ದೆ ಜನವಿರೋಧಿ ಸುಗ್ರಿವಾಜ್ಞೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಸರ್ಕಾರ ಇಲ್ಲ. ವಿರೋಧ ಪಕ್ಷಗಳನ್ನು ಎದುರಿಸಲು ಅವರಲ್ಲಿ ಶಕ್ತಿಯಿಲ್ಲ. ಹೀಗಾಗಿ ಕಲಾಪ ಕರೆಯುತ್ತಿಲ್ಲ. ಮುಂದಿನ ದಿನದಲ್ಲಿ ಜೈಲ್ ಬರೋ ನಡೆಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.