ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಕಯತ್ವ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ನಾಯಕರು ಚಿಂತನೆ ನಡೆಸಿದ್ದಾರೆ ಎಂಬ ಊಹಾಪೋಹಳು ಸುಳ್ಳು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದರೆ, ಸಿಎಂ ಹುದ್ದೆ ಖಾಲಿಯಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
ಗದಗ ನಗರದಲ್ಲಿ ಮಾತನಾಡಿದ ಡಿಸಿಎಂ ಗೋವಿಂದ್ ಕಾರಜೋಳ, ಪೂರ್ಣಾವಧಿಗೆ ಯಡಿಯೂರಪ್ಪ ಅವ್ರೇ ಸಿಎಂ ಆಗಿರುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಧ್ಯಮಗಳ ಸೃಷ್ಟಿ, ಯಾವುದೇ ಸತ್ಯಾಂಶ ಇಲ್ಲ ಎಂದ ಗೋವಿಂದ ಕಾರಜೋಳ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಅವರೇ ಬೆಳಗ್ಗೆ ಹೇಳಿದ್ದಾರೆ. ಎರಡು ದಿನ ಕಾದು ನೋಡಿ. ಯಾವುದೇ ಗೊಂದಲವಿಲ್ಲದೇ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದಿದ್ದಾರೆ.
ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ಯಾವುದೇ ಗೊಂದಲ ಇಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ ತಿಳಿಸಿದ್ದಾರೆ.
ಸಿಎಂ ಹುದ್ದೆ ಖಾಲಿಯಿಲ್ಲ-ಜಗದೀಶ್ ಶೆಟ್ಟರ್
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರಮಾಧಿಕಾರ. ಸಚಿವ ಸಂಪುಟಕ್ಕೆ ಎಷ್ಟು ಜನ ಸೇರ್ಪಡೆ ಅನ್ನೋದನ್ನು ಸಿಎಂ ಅವರೇ ತಿಳಿಸ್ತಾರೆ. ಯಡಿಯೂರಪ್ಪ ಅವರು ನಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದಾರೆ. ಆದರೆ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವ ಶೆಟ್ಟರ್ ನಿರಾಕರಿಸಿದ್ದಾರೆ.

ಇನ್ನು ಎರಡೂವರೆ ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಹೀಗಾಗಿ ಸಿಎಂ ಹುದ್ದೆ ಖಾಲಿಯಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧೋಗತಿಗೆ ಇಳಿದಿದೆ. ಹೀಗಾಗಿ ಸಿದ್ದರಾಮಯ್ಯ ಬೇಕಾಬಿಟ್ಟಿಯಾಗಿ ಮಾತನಾಡಲು ಶುರು ಮಾಡಿದ್ದಾರೆ. ಸಿದ್ದರಾಮಯ್ಯ ಏನು ನಮ್ಮ ಪಾರ್ಟಿಯ ಹೈಕಮಾಂಡಾ? ನಮ್ಮ ಪಾರ್ಟಿಯ ವಕ್ತಾರರಾ? ಎಂದು ಪ್ರಶ್ನಿಸಿರುವ ಶೆಟ್ಟರ್, ಮೊದಲು ತಮ್ಮ ಕಾಂಗ್ರೆಸ್ ಪಾರ್ಟಿಯನ್ನು ಅವರು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







