ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ : ಸಿದ್ದರಾಮಯ್ಯ
ಬೆಂಗಳೂರು : ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಸಿ.ಡಿ ತೋರಿಸಿ ಯಡಿಯೂರಪ್ಪ ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ.
ಬ್ಲಾಕ್‍ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ ಎಂದು ಸವಾಲ್ ಹಾಕಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ.
ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ.
ಬಿ.ಎಸ್. ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ.
ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









