ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು :ರಾಜಕುಮಾರ ಪಾಟೀಲ್
ಕಲಬುರಗಿ : ಸಿಎಂ ಬದಲಾವಣೆ ಕೇವಲ ಉಹಾಪೋಹವಷ್ಟೆ. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು ಎಂದು ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೇಳಿಬರುತ್ತಿರುವ ಸಿಎಂ ಬದಲಾವಣೆ ವಿಚಾರವಾಗಿ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬದಲಾವಣೆ ಕೇವಲ ಉಹಾಪೋಹ.
ಯಾವುದಕ್ಕೂ ಕಿವಿಗೊಡದೆ ಕ್ಷೇತ್ರದಲ್ಲಿ ಕೊರೊನಾ ವಿರುದ್ಧ ಹೋರಾಡಿ ಎಂದು ನಮ್ಮ ರಾಜ್ಯಾಧ್ಯಕ್ಷರು ಹೇಳಿದ್ದಾರೆ.
ಕೊರೊನಾ ವಿರುದ್ಧ ಪ್ರಭಲ ಹೋರಾಟ ನಡೆಯುತ್ತಿರುವ ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಅಪ್ರಸ್ತುತ.
ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು, ಅವರ ನೇತೃತ್ವದಲ್ಲಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದರು.
ಇನ್ನು ಯೋಗೇಶ್ವರ್ ಅವರನ್ನ ಸಂಪುಟದಿಂದ ಕೈ ಬಿಡಬೇಕು ಎನ್ನುವ ಒತ್ತಡದ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಕುಮಾರ್ ಪಾಟೀಲ್, ಯಾರನ್ನ ಕೈ ಬಿಡಬೇಕು.. ಯಾರನ್ನ ತಗೊಬೇಕು ಎನ್ನುವುದು ಸಿಎಂ ಪರಮಾಧಿಕಾರ ಎಂದರು.