ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಬಜೆಟ್ ಓದುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಅತಿ ಕಡಿಮೆ ಅವಧಿಯಲ್ಲಿ ಬಜೆಟ್ ಓದಿ ಮುಗಿಸಿಸುವ ಮೂಲಕ ರಾಜ್ಯದ ಆಯವ್ಯಯ ಇತಿಹಾಸದಲ್ಲಿ ಅತಿ ಕಡಿಮೆ ಅವಧಿಗೆ ಬಜೆಟ್ ಓದಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಿಎಂ ಅವರು 112 ಪುಟಗಳ ಬಜೆಟ್ ಪುಸ್ತಕ ಓದಲು 1 ಗಂಟೆ 40 ನಿಮಿಷಗಳ ಕಾಲ ತೆಗೆದುಕೊಂಡಿದ್ದಾರೆ.
ಇನ್ನು ಕಳೆದ ವರ್ಷ ಹೆಚ್.ಡಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡಿದ್ದರು. ಅಂದು ಹೆಚ್‌ಡಿಕೆ ಅವರು 3 ಗಂಟೆ 10 ನಿಮಿಷಗಳ ಕಾಲ ಬಜೆಟ್ ಓದಲು ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 4 ಗಂಟೆ 10 ನಿಮಿಷ ಬಜೆಟ್ ಓದಿದ್ದರು.