“ತಮ್ಮ ಕಣ್ಣೀರಿಗೆ ಯಡಿಯೂರಪ್ಪ ತಕ್ಕ ಪ್ರತಿಕಾರ”
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು, 29 ಮಂದಿ ಶಾಸಕರು ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಸಂಪುಟ ರಚನೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಭಾವ ಬೀರಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರು ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ ಎಂದಿದೆ.
ಕಾಂಗ್ರೆಸ್ ತನ್ನ ಟ್ವೀಟ್ ನಲ್ಲಿ..
ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ತಕ್ಕ ಪ್ರತಿಕಾರ ತೀರಿಸಿಕೊಳ್ಳುತ್ತಿದ್ದಾರೆ, ತಮ್ಮ ವಿರುದ್ಧದ ಬಂಡಾಯಗಾರರನ್ನ ಸಂಪುಟದಿಂದ ದೂರವಿಡುವ ಮೂಲಕ ಮೀರ್‍ಸಾದಿಕ್ ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ! ಕಟೀಲ್ ಕಾಮಿಡಿ ಮಾಡಲು ಮಾತ್ರ! ಸಿಎಂ ಆಯ್ಕೆಯಿಂದ ಸಚಿವರ ಆಯ್ಕೆವರೆಗೂ ಬಿಎಸ್ ವೈ ಅವರೇ ಹೈಕಮಾಂಡ್ ಆಗಿದ್ದಾರೆ.
ಮೊದಲೆಲ್ಲ ಕಾಂಗ್ರೆಸ್‍ಗೆ ಹೈಕಮಾಂಡ್ ಸಂಸ್ಕøತಿ ಎಂದು ಹೇಳುತ್ತಿದ್ದ ಬಿಜೆಪಿ ಈಗ ತಮ್ಮದೇ ಬಲಿಷ್ಠ ಹೈಕಮಾಂಡ್ ಎಂದು ಬಿಂಬಿಸಿಕೊಳ್ಳುತ್ತಾ ತಮ್ಮ ಡಬಲ್ ಸ್ಟ್ಯಾಂಡರ್ಡ್ ನೀತಿ ನಿರೂಪಿಸಿತ್ತು! ಯಡಿಯೂರಪ್ಪ ಅವರನ್ನು ಇಳಿಸುವಾಗ ಇದ್ದ ಬಲಶಾಲಿ ದೆಹಲಿ ಹೈಕಮಾಂಡ್, ಇಳಿದ ಮೇಲೆ ಮಂಡಿಯೂರಿ ಶರಣಾಯಿತಲ್ಲ ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ನಳಿನ್ ಕುಮಾರ್ ಕಟೀಲ್ ಎಂಬ ಮೀರ್‍ಸಾದಿಕ್ ಅದೆಷ್ಟೇ ಷಡ್ಯಂತ್ರ ರೂಪಿಸಿದರೂ ಯಡಿಯೂರಪ್ಪನವರ ಕೈ ಮೇಲಾಗಿದೆ, ಮೂಲ ಬಿಜೆಪಿಗರು ಮೂಲೆ ಗುಂಪಾದರೂ ಏನೂ ಮಾಡಲಾಗದ ಕಟೀಲ್ ತನಗೆ ಬೆನ್ನೆಲುಬಿಲ್ಲ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಬಿಜೆಪಿ ಈಗ ಬಿಜೆಪಿಯಾಗಿ ಉಳಿದಿಲ್ಲ, ವಿಜೆಪಿ ಆಗಿದೆ, ಅಂದರೆ ವಲಸಿಗರ ಜನತಾ ಪಾರ್ಟಿ ಎಂದು ವ್ಯಂಗ್ಯವಾಡಿದೆ.









