ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸರ್ಕಾರ ಬೀಳಿಸುವ ಯತ್ನ ನಡೆದಿಲ್ಲ. ಇದು ಕಾಂಗ್ರೆಸ್ ನ ಹುಚ್ಚುತನದ ಪರಮಾವಧಿ ಎಂದಿದ್ದಾರೆ.
ಸರ್ಕಾರ ಬೀಳಿಸುವ ಕೆಲಸ ಯಾರು ಮಾಡುತ್ತಿಲ್ಲ. ಬಿಜೆಪಿ ಶಾಸಕರನ್ನೂ ಯಾರು ಕರೆಯುತ್ತಿಲ್ಲ. ಮೂರು ಕ್ಷೇತ್ರಗಳ ಉಪ ಚುನಾವಣೆ ಮುಗಿದಿದೆ. ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಯತ್ತ ಮತದಾರರ ಒಲವಿದೆ. ಇದನ್ನು ಸಹಿಸಲಾಗದೆ ಕಾಂಗ್ರೆಸ್ ಈ ರೀತಿ ಆರೋಪ ಮಾಡಿದೆ ಎಂದು ಆರೋಪಿಸಿದ್ದಾರೆ.
ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ವಿರುದ್ಧ ಬಿಜೆಪಿ ಕಮಿಟಿ ರಚನೆ ಮಾಡಿದ್ದೇವೆ. ಈ ಕಮಿಟಿ ರಾಜ್ಯದಲ್ಲಿ ಪ್ರವಾಸ ಮಾಡಿ ಬಳಿಕ ವರದಿ ಕೊಡಲಿದೆ. ವರದಿಯನ್ನು ಪಡೆದ ನಂತರ ಮುಂದಿನ ಹೋರಾಟದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.