ಬೆಂಗಳೂರು : ಇಂದು ನಾಗರಪಂಚಮಿ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಡಿನ ಜನರಿಗೆ ನಾಗರಪಂಚಮಿ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ನಾಗರಪಂಚಮಿ ಹಬ್ಬದ ಹಾರ್ದಿಕ ಶುಭಕಾಮನೆಗಳು. ದೇವರು ಎಲ್ಲ ದುರಿತಗಳನ್ನು ಪರಿಹರಿಸಿ, ಎಲ್ಲರಿಗೂ ಸುಖ, ಸಂತೋಷ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ನಾಡಿಗೆ ಮಂಗಳವನ್ನು ಉಂಟುಮಾಡಲಿ ಎಂದು ಪ್ರಾರ್ಥಿಸೋಣ. ಮನೆಗಳಲ್ಲಿಯೇ ದೇವರನ್ನು ಪ್ರಾರ್ಥಿಸಿ, ಸಾಮಾಜಿಕ ಅಂತರ ಸೇರಿದಂತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯ ಪಾಲಿಸಿ ಎಂದು ಬರೆದುಕೊಂಡಿದ್ದಾರೆ.









