ಬೆಂಗಳೂರು : ನಟ, ರಾಜಕಾರಣಿ, ಮಂಡ್ಯದ ಗಂಡು ದಿವಂಗತ ಅಂಬರೀಶ್ ಅವರ ಜನ್ಮ ದಿನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭಾಶಯಗಳು ತಿಳಿಸಿದ್ದಾರೆ. ಹುಟ್ಟುಹಬ್ಬದ ಶುಭಕೋರಿ ಟ್ವೀಟ್ ಮಾಡಿರುವ ಬಿ.ಎಸ್. ಯಡಿಯೂರಪ್ಪ, ಜನಪ್ರಿಯ ನಟ, ಹಿರಿಯ ರಾಜಕಾರಣಿ, ದಿವಂಗತ ಅಂಬರೀಶ್ ಅವರ ಜನ್ಮ ದಿನವಿಂದು. ಅವರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ನೆನಪಿಸಿಕೊಳ್ಳೋಣ ಎಂದು ನಟ, ರಾಜಕಾರಣಿ ಅಂಬರೀಶ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೆ ಅಂಬರೀಶ್ ಕನ್ನಡ ಚಿತ್ರರಂಗದಲ್ಲಿ ಮರೆಲಾರದಂತೆ ಹೆಸರು ಮಾಡಿದ್ದಾರೆ. ಅಭಿಮಾನಿಗಳ ನೆಚ್ಚಿನ ರೆಬೆಲ್ ಸ್ಟಾರ್ ಆಗಿದ್ದರು. ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಸ್ಮರಿಸಿದ್ದಾರೆ.









