ಕಾಪು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳನ್ನು ಹರಿದಾಡುತ್ತಿದ್ದು, ಈ ಬಗ್ಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರತಿಕ್ರಿಯಿಸಿ, ಬಿ.ಎಸ್.ಯಡಿಯೂರಪ್ಪ ಅವರೇ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಹೇಳಿದ್ದಾರೆ.
ಕಾಪುವಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹ ಎದ್ದಿದೆ. ಆದರೆ ಇಲ್ಲಿ ಯಾವುದೇ ಹುದ್ದೆ ಖಾಲಿಯಿಲ್ಲ. ಯಡಿಯೂರಪ್ಪ ಅವರೇ ಪೂರ್ಣಾವಧಿಯವರೆಗೂ ಮುಖ್ಯಮಂತ್ರಿಯಾಗಿ ಅಧಿಕಾರ ನಡೆದಲಿದ್ದಾರೆ ಎಂದರು.
ಇದೇ ವೇಳೆ ಸಿಂಧೂ ರೂಪೇಶ್ ವರ್ಗಾವಣೆ ಬಗ್ಗೆ ಮಾತನಾಡಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ ಸರಕಾರದ ಸಹಜ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಯಾರದ್ದೂ ಕೈವಾಡವಿಲ್ಲ. ಆರೋಪ ಮಾಡುವ ಮುನ್ನ ಮಾಜಿ ಸಚಿವ ಯು.ಟಿ. ಖಾದರ್ ಅವರು ಸರಕಾರದ ಇಂತಹ ಯೋಜನೆಗಳ ಬಗ್ಗೆ ಅರಿತುಕೊಂಡೇ ಮಾತನಾಡುವ ಅಗತ್ಯವಿದೆ ಎಂದರು.