ಬಿಎಸ್ ವೈ ರಾಜೀನಾಮೆ ಅಂಗೀಕಾರ : ಸಂಪುಟ ವಿಸರ್ಜನೆ
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಸಂಪುಟ ವಿಸರ್ಜನೆಯಾಗಿದೆ. ಆದ್ರೆ ಮುಂದಿನ ಸಿಎಂ ಆಯ್ಕೆ ಆಗುವವರೆಗೂ ಬಿಎಸ್ ವೈ ಹಂಗಾಮಿ ಸಿಎಂ ಆಗಿ ಮುಂದುವರೆಯಲಿದ್ದಾರೆ.
ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಅವರು ವಿಧಾನಸೌಧದಲ್ಲಿ ಭಾಷಣ ಮಾಡಿದ್ದು, ರಾಜೀನಾಮೆ ಘೋಷಣೆ ಮಾಡಿದ್ದಾರೆ.
ನಾನು ತೀರ್ಮಾನ ಮಾಡಿದ್ದೇನೆ. ಊಟ ಮಾಡಿದ ನಂತರ ರಾಜಭವನಕ್ಕೆ ಹೋಗಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನ ಮಾಡಿದ್ದೇನೆ. 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಭಾವುಕರಾದರು.
ನಾನು ದುಃಖದಿಂದ ಅಲ್ಲ, ಸಂತೋಷದಿಂದ ರಾಜೀನಾಮೆ ಸಲ್ಲಿಸುತ್ತೇನೆ. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡಲ್ಲ ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು. ಎಲ್ಲರು ಒಟ್ಟಾಗಿ ಕೆಲಸ ಮಾಡೋಣ ಎಂದು ಕಣ್ಣೀರು ಹಾಕಿದ್ದಾರೆ.
ಇತ್ತ ಮುಂದಿನ ಸಿಎಂ ಯಾರು ಎಂಬ ವಿಚಾರವಾಗಿ ಕಸರತ್ತು ಮುಂದುವರಿದಿದ್ದು, ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಮುಖ್ಯಮಂತ್ರಿ ಕಿರೀಟ ದೊರೆಯಲಿದೆ ಎಂದು ಹೇಳಲಾಗುತ್ತಿದೆ.