ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದೆ.
ಸಿಐಡಿ ಸಲ್ಲಿಸಿದ್ದ ಚಾರ್ಜ್ ಶೀಟ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು. ಆದರೆ, ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ಮುಂದೂಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೊ (POCSO) ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.