ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿ ಯಡಿಯೂರಪ್ಪನವರದು ಕಿಚನ್ ಕ್ಯಾಬಿನೆಟ್ ಎಂದು ಲೇವಡಿ ಮಾಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿ ನಡೆದ ಶೇ 10% ಕೆಲಸ ಕೂಡ ಈಗ ಆಗುತ್ತಿಲ್ಲ. ಬರೀ ಕಮಿಷನ್ ಹೊಡೆಯುವುದೇ ಕೆಲಸವಾಗಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಅವರಿಗೆ ಸೂಪರ್ ಸಿಎಂಗಳಿದ್ದು, ಅವರದು ಕಿಚನ್ ಕ್ಯಾಬಿನೆಟ್ ಆಗಿದೆ. ಅವರು ಯಾವ ಸಲಹೆ ಕೊಡುತ್ತಿದ್ದಾರೆಯೋ ಗೊತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಲೇವಡಿ ಮಾಡಿದರು. ಯಡಿಯೂರಪ್ಪ ಅವರು ವಿಪಕ್ಷದಲ್ಲಿ ಇದ್ದಾಗ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಈಗ ಅವರು ಅಧಿಕಾರದಲ್ಲಿದ್ದು ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ರಾಜ್ಯದ ಬೊಕ್ಕಸದಲ್ಲಿ ಹಣವೇ ಇಲ್ಲ. ಎಲ್ಲಿಂದ ಹಣ ತರುತ್ತಾರೆ ಎಂದು ಪ್ರಶ್ನಿಸಿದರು.
ಪಂಚಮಸಾಲಿ ಪ್ರತಿಭಟನೆ ಗಾಯದ ಮೇಲೆ ‘ಉಪ್ಪು’ ಸವರಿದ CM & ಕಿಚ್ಚು ಹೊತ್ತಿಸಿದ ‘ಪರಂ’..!
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್...