ಯಲಹಂಕ ಮೇಲ್ಸೇತುವೆ ಸಾವರ್ಕರ್ ಹೆಸರು ಫಿಕ್ಸ್.!

ಬೆಂಗಳೂರು : ಯಲಹಂಕ ಪ್ಲೈ ಓವರ್ ಗೆ ವೀರ ಸಾವರ್ಕರ್ ಹೆಸರು ಇಡಬೇಕು ಎನ್ನುವ ವಿಚಾರದ ರಾಜ್ಯದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟೇ ತೀರುತ್ತೇವೆ ಎಂದು ರಾಜ್ಯ ಬಿಜೆಪಿ ನಾಯಕರು ಪಣತೊಟ್ಟಿದ್ದರು. ಅದರಂತೆ ಈ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡೋದು ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯಾಗಿತ್ತು. ಆದರೆ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಯಿತು. ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡೋದನ್ನ ವಿರೋಧಿಸಿ ಹೋರಾಟಕ್ಕೆ ಇಳಿದಿದ್ದವು.

ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಈ ವಿಚಾರ ಭಾರಿ ಸದ್ದು ಮಾಡಿತ್ತು. ಸರ್ಕಾರ ನಿರ್ಣಯದ ಪರ ಕೆಲವರು, ಸರ್ಕಾರದ ವಿರುದ್ಧ ಕೆಲವರು ತಮ್ಮದೇ ಆದ ವಾದಗಳನ್ನು ಮಂಡಿಸುತ್ತಿದ್ದರು. ವಿಪಕ್ಷಗಳ ಹೋರಾಟ, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಕಾರಣದಿಂದಾಗಿ ಈ ಕಾರ್ಯಕ್ರಮವನ್ನು ಸರ್ಕಾರ ಮುಂದೂಡಿತ್ತು.

ಇದರ ನಡುವೆ ನಿನ್ನೆ ಬಿಬಿಎಂಪಿ ವೀರ ಸಾರ್ವಕರ್ ಹೆಸರನ್ನು ಇಡುವ ಸಂಬಂಧ ನಿರ್ಣಯವೊಂದನ್ನು ಅಂಗೀಕರಿಸಿದೆ. ನಿನ್ನೆ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಕಾಂಗ್ರೆಸ್ ನ ಸದಸ್ಯರು ಇಲ್ಲದ ಸಂದರ್ಭದಲ್ಲಿ ಬಿಜೆಪಿಯ ಸದಸ್ಯರು ಈ ನಿರ್ಣಯವನ್ನು ಮಂಡಿಸಿ ಅಂಗೀಕಾರ ಕೂಡ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This