ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ karnataka saaksha tv
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಕಾರಣದಿಂದಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇತ್ತ ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಸದ್ಯ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.