Karnataka ರಾಜ್ಯಕ್ಕೆ ಮುಂಗಾರು.. ಮುಂಬೈ ಕರ್ನಾಟಕ ಭಾಗದಲ್ಲಿ ಯೆಲ್ಲೋ ಅಲರ್ಟ್ Karnataka
ಬೆಳಗಾವಿ : ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ಮುಂಬೈ ಕರ್ನಾಟಕ ಜಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಾಡಿಕೆಯಂತೆ ಜೂನ್.1ರಂದೇ ಪ್ರವೇಶವಾಗಬೇಕಿದ್ದ ಮುಂಗಾರು ಮಾರುತಗಳು ನಾಲ್ಕು ದಿನ ತಡವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳನ್ನು ಪ್ರವೇಶಿಸಿವೆ.
ಇಂದು ನೈಋತ್ಯ ಮುಂಗಾರು ಉತ್ತರ ಒಳನಾಡಿನ ಪ್ರದೇಶ ತಲುಪಲಿದೆ. ಆ ಮೂಲಕ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇವತ್ತು ಉತ್ತರ ಒಳನಾಡನ್ನು ಹಾದು ಹೋಗುವ ಮೂಲಕ ಈ ಮಾರುತಗಳು ಇಡೀ ರಾಜ್ಯ ಆವರಿಸಲಿವೆ.
ಇಂದು ಅತ್ಯಧಿಕ ಮಳೆ ಬೀಳುವುದರಿಂದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೆ ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಪ್ರವೇಶವಾದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಜೂನ್ 7ರವರೆಗೂ ಮಳೆ ಮುಂದುವರೆಯಲಿದೆ.