ಬೆಂಗಳೂರಲ್ಲಿ ಇನ್ನೂ 2 ದಿನ ಮಳೆ : ಯೆಲ್ಲೋ ಅಲರ್ಟ್ ಘೋಷಣೆ Bangalore saaksha tv
ಬೆಂಗಳೂರು : ಸಿಲಿಕಾನ್ ಯಲ್ಲಿ ಕಳೆದ ಕೆಲ ದಿನಗಳಿಂದ ವರುಣ ಅಬ್ಬರಿಸಿ ಬೊಬ್ಬರಿಯುತ್ತಿದ್ದಾನೆ.
ಈ ಆರ್ಭಟ ಇನ್ನೂ ಎರಡು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಕೆಲದಿನಗಳಿಂದ ಮಳೆಯಾಗುತ್ತಿದೆ.
ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಪಶ್ಚಿಮ ಘಟ್ಟದ ಎಲ್ಲ ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಎಡೆ ಬಿಡದೇ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.