ಹೌದು, ನಾನು ಜಾತಿವಾದಿ.. ಏನೀಗ : ಸಿದ್ದರಾಮಯ್ಯ siddaramaiah saaksha tv
ಬೆಂಗಳೂರು : ಶೋಷಿತ ಜಾತಿಗಳು ತಮಗಾಗಿರುವ ಅನ್ಯಾಯವನ್ನು ಹೇಳಿಕೊಳ್ಳಲು ಸಂಘಟಿತರಾಗಿವುದು ತಪ್ಪಲ್ಲ, ಅದು ಜಾತಿವಾದವೂ ಅಲ್ಲ. ಅಂತಹ ಜಾತಿ ಸಮಾವೇಶಗಳಲ್ಲಿ ಭಾಗವಹಿಸುವುದು ಜಾತಿವಾದವಾದರೆ.. ಹೌದು, ನಾನು ಜಾತಿವಾದಿ.. ಏನೀಗ ಬಿಜೆಪಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಬಂಜಾರ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳಲ್ಲಿದ್ದ ಬಡವರ ಸಾಲವನ್ನು ಮನ್ನಾ ಮಾಡಿದ್ದೆ. ಇದು ಜಾತಿವಾದವೇ ಬಿಜೆಪಿ?
ನಮ್ಮ ಸರ್ಕಾರ ಬಂಜಾರ ಸಮಾಜದ ಅಭಿವೃದ್ಧಿಗೆ ವಾರ್ಷಿಕ 200 ಕೋಟಿ ರೂಪಾಯಿಗಳನ್ನು ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅನುದಾನವನ್ನು ಬರೀ 10 ಕೋಟಿಗೆ ಇಳಿಸಿದೆ. ಸರ್ಕಾರವೇ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಬೇಕೆಂದು ಆದೇಶ ಹೊರಡಿಸಿದವನು ನಾನೆ. ಇದು ಜಾತಿವಾದವೇ?
ತಾಂಡಾಗಳು, ಹಟ್ಟಿಗಳು, ಮಜರೆಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕ್ರಾಂತಿಕಾರಕ “ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯಿದೆ” ಯನ್ನು ಜಾರಿಗೊಳಿಸಿ, ಲಕ್ಷಾಂತರ ಬಡ ಜನರಿಗೆ ಭೂಮಿಯ ಒಡೆತನದ ಹಕ್ಕು ನೀಡಿದ್ದು ನಮ್ಮ ಸರ್ಕಾರ. ಇದು ಜಾತಿವಾದವೇ ಬಿಜೆಪಿ?
ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಬಂಜಾರ ಸಮುದಾಯದ ಕುಲಕಸುಬಾದ ಕಸೂತಿ ವೃತ್ತಿಯನ್ನು ಅಭಿವೃದ್ಧಿ ಪಡಿಸಲು ರೂ.100 ಕೋಟಿ ಅನುದಾನ ನೀಡುತ್ತೇವೆ ಮತ್ತು ಕಸೂತಿ ಉತ್ಪನ್ನಗಳಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುತ್ತೇವೆ. ಬಿಜೆಪಿ ತಾಕತ್ತಿದ್ದರೆ ವಿರೋಧಿಸಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.