ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಆವರಣದ ಡಾ. ರಾಜಕುಮಾರ್ ಗಾಜಿನ ಮನೆಯಲ್ಲಿ ಇಂದು ಹಮ್ಮಿಕೊಂಡಿರುವ “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಗೆ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.
ಈ ವೇಳೆ ಎಲ್ಲಾ ವಿಶೇಷ ಆಯುಕ್ತರುಗಳು, ಉಪ ಆಯುಕ್ತರು, ಖ್ಯಾತ ವೈದ್ಯರಾದ ಡಾ. ಅಂಜನಪ್ಪ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.








