ಕೊರೊನಾ ಲಸಿಕೆ ವಿಚಾರದಲ್ಲಿ  ಉಲ್ಟಾ ಹೊಡೆದ ಬಾಬಾ ರಾಮ್ ದೇವ್..!

1 min read
ramdev-baba

ಕೊರೊನಾ ಲಸಿಕೆ ವಿಚಾರದಲ್ಲಿ  ಉಲ್ಟಾ ಹೊಡೆದ ಬಾಬಾ ರಾಮ್ ದೇವ್..!

ಯೋಗ ಗುರು ಬಾಬಾ ರಾಮ್ ದೇವ್ ಅವರು ಆರಂಭದಿಂದಲೂ ಕೋವಿಡ್ ಲಸಿಕೆ ವಿಚಾರದಲ್ಲಿ, ವೈದ್ಯರ ವಿರುದ್ಧ ಹೇಳಿಕೆಗಳನ್ನ ನೀಡುತ್ತಾ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದರು.. ಜೊತೆಗೆ ತಾವು ಲಸಿಕೆ ಪಡೆಯುವುದಿಲ್ಲ ಎಂದಿದ್ದರು.. ಇದೀಗ ಇತ್ತೀಚೆಗೆ ವೈದ್ಯರು ಬಾಬಾ ರಾಮ್ ದೇವ್ ವಿರುದ್ಧ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಲಸಿಕೆ ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹೌದು ಬಾಬಾ ರಾಮ್ದೇವ್ ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ. ಕೊರೊನಾ ವೈರಸ್ ಹಾಕಿಸಿಕೊಳ್ಳಲಿರುವ ರಾಮ್ದೇವ್ ಜನರಿಗೂ ಕೊರೊನಾ ಲಸಿಕೆ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಹಿಂದೆ ಬಾಬಾ ರಾಮದೇವ್, ಯೋಗ ಮತ್ತು ಆಯುರ್ವೇದದ ಡಬಲ್ ಡೋಸ್ ತೆಗೆದುಕೊಳ್ಳುತ್ತಿದ್ದೇನೆ. ಕೊರೊನಾ ಲಸಿಕೆ ಪಡೆಯುವ ಅಗತ್ಯವಿಲ್ಲ ಎಂದು ಹೇಳಿದ್ದರು. ವೈರಸ್ ನ ಎಷ್ಟು ರೂಪಾಂತರ ಬಂದರೂ ಸೋಂಕಿನ ಅಪಾಯಕ್ಕೆ ಒಳಗಾಗುವುದಿಲ್ಲವೆಂದು ಬಾಬಾ ರಾಮ್‌ದೇವ್ ಹೇಳಿಕೊಂಡಿದ್ದರು. ಯೋಗ ಎಲ್ಲವನ್ನೂ ನಿಭಾಯಿಸಲಿದೆ ಎಂದು ಅವರು ಹೇಳಿದ್ದರು.

ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬೇಕು. ಇದರಿಂದ ಸೋಂಕನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದರು. ಆದ್ರೆ ಈಗ ಲಸಿಕೆ ತೆಗೆದುಕೊಳ್ಳುವ ನಿರ್ಧಾರ ಏಕೆ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಬಾಬಾ ರಾಮದೇವ್, ಯೋಗ ಮತ್ತು ಆಯುರ್ವೇದವನ್ನು ಅಭ್ಯಾಸ ಮಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd