ಯೋಗೀಶಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಆಪ್ತ ಸಿಬಿಐ ವಶಕ್ಕೆ
ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ.
ಸೋಮು ನ್ಯಾಮಗೌಡ ಅವರು ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಾಜಿ ಆಪ್ತ ಸಹಾಯಕರಾಗಿದ್ದರು.
ಈ ಕಾರಣಕ್ಕಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳೊಗ್ಗೆ ಗದಗದ ನಿವಾಸದಲ್ಲಿ ಸೋಮು ನ್ಯಾಮಗೌಡರನ್ನು ಅಧಿಕಾರಿಗಳು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಹಿಂದಯೂ ಕೂಡ ಸೋಮು ಅವರ ವಿಚಾರಣೆ ನಡೆದಿತ್ತು.