ಚಾಮರಾಜನಗರ: ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.
ಮಹದೇವಯ್ಯ ನಾಪತ್ತೆಯಾಗಿರುವ ಕುರಿತು ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದ್ದವು. ಇಂದು ಅವರ ಕಾರು ಕೂಡ ಪತ್ತೆಯಾಗಿತ್ತು. ಅದರಲ್ಲಿ ರಕ್ತದ ಕಲೆಗಳು ಕಂಡು ಬಂದಿತ್ತು. ಆಗ ಕೊಲೆಯ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದರು. ಆದರೆ, ಸದ್ಯ ಜಿಲ್ಲೆಯ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದೆ.
ಮಹದೇವಯ್ಯ ಚನ್ನಪಟ್ಟಣ ತೋಟದ ಮನೆಯಲ್ಲಿದ್ದಾಗ ಮನೆಗೆ ನುಗ್ಗಿದ್ದ ಮೂವರು ಅಪರಿಚಿತರು ಲಾಕರ್ ಓಪನ್ ಮಾಡಿಸಿ ಪತ್ರ ದುಡ್ಡು ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿತ್ತು. ಕಾರಿನಲ್ಲಿಯೇ ಕರೆದುಕೊಂಡು ಚಾಮರಾಜನಗರ ಜಿಲ್ಲೆಗೆ ಬಂದಿದ್ದು, ನಂತರ ಕೊಳ್ಳೇಗಾಲದ ಬಳಿ ಹಂತಕರು ಡಾಬಾದಲ್ಲಿ ಪಾರ್ಟಿ ಮಾಡಿ ಹನೂರು ತಾಲೂಕಿ ನಾಲಾರೋಡ್ ಬಳಿಗೆ ಬಂದು ಕೊಲೆ ಮಾಡಿ ಅರಣ್ಯ ಪ್ರದೇಶದಲ್ಲಿ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ.
ರಾಮಾಪುರದಲ್ಲಿ ಕಾರು ನಿಲ್ಲಿಸಿರುವ ಹಂತಕರು, ಡಿ. 2ರ ಬೆಳಗ್ಗೆ 5.15ಕ್ಕೆ ರಾಮಾಪುರದ ಮುಖ್ಯರಸ್ತೆಯಲ್ಲಿ ಟೀ ಕುಡಿದು ಹೋಗಿರುವ ಶಂಕೆ ವ್ಯಕ್ತವಾಗಿತ್ತು. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.