ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election) ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಹೈಕಮಾಂಡ್ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amith Shah), ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರೊಂದಿಗೆ ವಿವಿಧ ರಾಜ್ಯದ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಇಂದು ಮಂಡ್ಯ (Mandya) ಮತ್ತು ವಿಜಯಪುರ (Vijayapura) ಜಿಲ್ಲೆಗೆ ಹಿಂದೂ ಫೈಯರ್ ಬ್ರ್ಯಾಂಡ್, ಉತ್ತರ ಪ್ರದೇಶ ಸಿಎಂ ಯೋಗಿ ಯೋಗಿ ಆದಿತ್ಯನಾಥ್ (Yogi Adithynatrh) ಅವರು ಆಗಮಿಸಲಿದ್ದಾರೆ.
11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರರ ದರ್ಶನ ಪಡೆದು ಮಧ್ಯಾಹ್ನ 3.05ಕ್ಕೆ ಬಸವನಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಪರ ಪ್ರಚಾರ ಮಾಡಲಿದ್ದಾರೆ.
ಇದಾದ ನಂತರ ಸಂಜೆ 4.50ಕ್ಕೆ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಇಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ್ ಪರ ಮತಯಾಚಿಸಲಿದ್ದಾರೆ. ಸಮಾವೇಶ ಮುಗಿದ ಬಳಿಕ ಉತ್ತರ ಪ್ರದೇಶದ ಲಖನೌಗೆ ನಿರ್ಗಮಿಸುತ್ತಾರೆ.