Yogi government
ಯುಪಿಯಲ್ಲಿ ‘ ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ರಚನೆಗೆ ಯೋಗಿ ಸರ್ಕಾರ ಸಜ್ಜು..!
ಉತ್ತರ ಪ್ರದೇಶ : ಮಧ್ಯಪ್ರದೇಶದ ಮಾದರಿಯಲ್ಲೇ ಲವ್ ಜಿಹಾದ್ ವಿರುದ್ಧದ ಕಠಿಣ ಕಾನೂನನ್ನ ತರಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ಉತ್ತರ ಪ್ರದೇಶದ ಗೃಹ ಇಲಾಖೆಯು ಅಲ್ಲಿನ ಕಾನೂನು ಇಲಾಖೆಗೆ ಪ್ರಸ್ತಾವನೆಯನ್ನೂ ಕಳುಹಿಸಿದೆ ಎನ್ನಲಾಗಿದೆ.
ಲವ್ ಜಿಹಾದ್ ಪ್ರಕರಣಗಳ ಕಡಿವಾಣಕ್ಕೆ ಕಾಯ್ದೆ ರೂಪಿಸಲು ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ಮುಂದಾಗಿದೆ. ಇದೀಗ ಇದೀಗ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ರಚನೆ ಕುರಿತು ಉತ್ತರ ಪ್ರದೇಶ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಮಧ್ಯ ಪ್ರದೇಶದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನದಲ್ಲೇ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತರುವ ಸುಳಿವು ನೀಡಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು, ವಿವಾಹದ ಕಾರಣಕ್ಕಾಗಿ ನಡೆಯುವ ಧಾರ್ಮಿಕ ಮತಾಂತರ ನಿಷೇಧಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸುವುದಾಗಿ ಹೇಳಿದ್ದಾರೆ.
ಸದ್ಯ ಉತ್ತರ ಭಾರತದ ಭಾಗದಲ್ಲಿ ಅದರಲ್ಲೂ ಹೆಚ್ಚಾಗಿ ಉತ್ತರ ಪ್ರದೇಶ , ಮಧ್ಯಪ್ರದೇಶ ನೆರೆ ರಾಜ್ಯಗಳಲ್ಲಿ ಲವ್ ಜಿಹಾದ್, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಮಧ್ಯಪ್ರದೇಶ ಸಜ್ಜಾದ ಬೆನ್ನಲ್ಲೇ ಇದೀಗ ಉತ್ತರಪ್ರದೇಶ ಸರ್ಕಾರವೂ ಕಠಿಣ ಕ್ರಮಕ್ಕೆ ಮುಂದಾಗಿದೆ.
Yogi government
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








