ಚಿಕ್ಕಬಳ್ಳಾಪುರ: ಸಂಸದ ಡಾ. ಕೆ. ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗಿದ್ದಾರೆ.
ಚಿಕ್ಕಬಳ್ಳಾಪುರ ನಗಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತಿದ್ದಂತೆ ಶಾಸಕ ಪ್ರದೀಪ್ ಈಶ್ವರ್ ಕೆಂಡಾಮಂಡಲವಾಗಿದ್ದಾರೆ. ಕೋವಿಡ್ ನಿಂದ ಕದ್ದ ಹಣದಿಂದ ಸುಧಾಕರ್ ಚುನಾವಣೆ ಮಾಡಿದ್ದಾರೆ. ಹೀಗಾಗಿ ಗೆದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸುಧಾಕರ್ ಮಾತಿಗೆ ಪ್ರತಿಕ್ರಿಯಿಸಿ, ಗುಡುಗಿದ್ದಾರೆ.
ಕೆ. ಸುಧಾಕರ್ (K.Sudhakar) ಒಬ್ಬ ಕೋವಿಡ್ ಕಳ್ಳ. ಆತನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೋಡೋಣ ಎಂದು ಸುಧಾಕರ್ ಗೆ ಸವಾಲು ಹಾಕಿದ್ದಾರೆ.
ಸುಧಾಕರ್ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು ಎಂದು ಗುಡುಗಿದ್ದಾರೆ.








