ಸರಕಾರಿ ನೌಕರಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ
ಶಿವಮೊಗ್ಗ : ಅಣ್ಣಂದಿರಂತೆ ತನಗೆ ಸರಕಾರಿ ಉದ್ಯೋಗ ಸಿಗಲಿಲ್ಲವೆಂದು ಮನನೊಂದು ತಮ್ಮ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ ತಾಲೂಕಿನ ಮೆಳವರಿಗೆ ಗ್ರಾಮದಲ್ಲಿ ನಡೆದಿದೆ.
ರವಿ ಮೃತ ದುರ್ದೈವಿ. ಸರಕಾರಿ ಉದ್ಯಗ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ಆತ್ನಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈತನ ಇಬ್ಬರು ಅಣ್ಣಂದಿರು ಸರ್ಕಾರಿ ಉದ್ಯೋಗದಲ್ಲಿದ್ದಾರೆ. ರವಿ ಹಲವು ಸಲ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನ ಪಟ್ಟಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.
ಸರ್ಕಾರಿ ನೌಕರಿ ಸಿಗದ ಕಾರಣ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಡ್ ಬರೆದಿಟ್ಟು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ.