ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಯುವ ನಾಯಕ ಹಾರ್ದಿಕ್ ಪಟೇಲ್….
ಗುಜರಾತ್ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸುತ್ತಿದೆ. ಬೂದಿ ಮುಂಚಿದ ಕೆಂಡದಂತಿದ್ದ ಆತಂರಿಕ ಕಲಹ ಇದೀಗ ಒಮ್ಮೆಲೆ ಸ್ಪೋಟಗೊಂಡಿದೆ.
ಪಕ್ಷದ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್‌ನ ಉನ್ನತ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೋದಿ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ.
ಹಾರ್ದಿಕ್ ಪಟೇಲ್ ರಾಜೀನಾಮೆ ಕುರಿತು ಟ್ವಿಟರ್ ನಲ್ಲಿ ಶೇರ್ “ಇಂದು ನಾನು ಕಾಂಗ್ರೆಸ್ ಪಕ್ಷದ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಧೈರ್ಯದಿಂದ ರಾಜೀನಾಮೆ ನೀಡುತ್ತೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ಭವಿಷ್ಯದಲ್ಲಿ ನಾನು ಗುಜರಾತ್‌ಗಾಗಿ ನಿಜವಾಗಿಯೂ ಧನಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಹಲವು ಪ್ರಯತ್ನಗಳ ನಂತರವೂ ಕಾಂಗ್ರೆಸ್ ಪಕ್ಷವು ದೇಶ ಮತ್ತು ಸಮಾಜದ ಹಿತದೃಷ್ಟಿಯಿಂದ ಸಂಪೂರ್ಣ ವಿರುದ್ಧವಾದ ಕೆಲಸ ಮಾಡುತ್ತಿರುವುದರಿಂದ ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹಾರ್ದಿಕ್ ಪಟೇಲ್ ಬರೆದಿದ್ದಾರೆ.
28 ವರ್ಷದ ಹಾರ್ದಿಕ್ 2015ರಲ್ಲಿ ಗುಜರಾತ್ನಲ್ಲಿ ಪಟೇಲ್ ಸಮುದಾಯದ ಮೀಸಲಾತಿ ಚಳವಳಿ ಮುನ್ನಡೆಸುವ ಮೂಲಕ ಮುನ್ನೆಲೆಗೆ ಬಂದಿದ್ದರು. ನಂತರ 2019ರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.








