ಹೊಸ ವರ್ಷ ಆಚರಣೆ ವೇಳೆ ಚಾಕು ಇರಿತ : ಯುವಕ ಸಾವು

1 min read
kalaburagi saaksha tv

ಹೊಸ ವರ್ಷ ಆಚರಣೆ ವೇಳೆ ಚಾಕು ಇರಿತ : ಯುವಕ ಸಾವು kalaburagi saaksha tv

ಕಲಬುರಗಿ : ಹೊಸ ವರ್ಷ ಆಚರಣೆ ಮಾಡುತ್ತಿದ್ದ ಯುವಕನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಕಲಬುರಗಿಯ ಭವಾನಿ ನಗರದಲ್ಲಿ ನಡೆದಿದೆ.

ಮಲ್ಲಿಕಾರ್ಜುನ ಚಾಕು ಇರಿತಕ್ಕೆ ಒಳಗಾಗಿ ಸಾವನ್ನಪ್ಪಿದ ಯುವಕನಾಗಿದ್ದಾರೆ.

ಈತ ಮನೆಯ ಮುಂದೆ  ಸೌಂಡ್ ಬಾಕ್ಸ್ ಹಾಕಿಕೊಂಡು ಡ್ಯಾನ್ಸ್ ಮಾಡ್ತಿದ್ದ ವೇಳೆ ಇದೇ ಬಡಾವಣೆಯ ವಿರೇಶ್ ಮತ್ತು ಆತನ ಸ್ನೇಹಿತರು ಗಲಾಟೆ ಮಾಡಿದ್ದಾರೆ.

kalaburagi saaksha tv

ಆಗ ಇಬ್ಬರ ಮಧ್ಯೆ ಜಗಳವಾಗಿದ್ದು, ವೀರೇಶ್​ ಹಾಗೂ ಆತನ ಸಹಚರರು ಮಲ್ಲಿಕಾರ್ಜುನ್ ಗೆ  ಚಾಕು ಇರಿದು ಪರಾರಿಯಾಗಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇತ್ತ ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd