ಹಾಸನ: ಯುವತಿಯೊಬ್ಬರು ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಗೊರೂರಿನಲ್ಲಿ (Gorur) ನಡೆದಿದೆ. ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬುವವರ ಪುತ್ರಿ ನಿತ್ಯ (19) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ.
ಮೃತ ಯುವತಿಯು ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಪೂಜೆ ಮುಗಿಸಿ, ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಮುಳಿಗಿದ್ದಾರೆ. ಸದ್ಯ ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.