ಚಿಕ್ಕಮಗಳೂರು: ರಾಜ್ಯದಲ್ಲಿ ಡೆಂಗ್ಯೂ ಆತಂಕ ಹೆಚ್ಚಾಗಿದ್ದು, ಕಾಫಿನಾಡಿನಲ್ಲಿ ಮೊದಲ ಬಲಿಯಾಗಿದೆ.
ವಿದ್ಯಾರ್ಥಿನಿಯೋರ್ವಳು ಡೆಂಗ್ಯೂ ಜ್ವರದಿಂದ (Dengue Fever) ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಸಹನಾ ಬಾನು (18) ಸಾವನ್ನಪ್ಪಿದ ಮಹಿಳೆ. ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿಯ ಸಹನಾ ಬಾನು, ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾಳೆ.