ಹೊಸಕೋಟೆ | ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ
ಹೊಸಕೋಟೆ : ಪಟ್ಟಣದ ಎಂ ಬಿ ಬಡಾವಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ನಾನಾ ಅನುಮಾನಗಳಿಗೆ ಕಾರಣವಾಗಿದೆ.
ಕೊರಟಗೆರೆಯ ಅಶ್ವಿನಿ ಮೃತ ಯುವತಿಯಾಗಿದ್ದು, ಮೂರು ದಿನಗಳ ಹಿಂದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗ್ತಿದೆ.
ಎರಡು ವರ್ಷಗಳ ಹಿಂದೆ ಅಶ್ವಿನಿಗೆ ಸುರೇಶ್ ಎಂಬಾತ ಫೇಸ್ ಬುಕ್ ನಲ್ಲಿ ಪರಿಚಯವಾಗಿತ್ತಂತೆ.
ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದು, ಎರಡು ತಿಂಗಳ ಹಿಂದೆ ಸುರೇಶ್ ಅಶ್ವಿನಿಯನ್ನು ಹೊಸಕೋಟೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆತಂದು ಆಕೆಯ ಜೊತೆಗೆ ವಾಸವಿದ್ದನಂತೆ.
ಆದ್ರೆ ಅಶ್ವಿನಿ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇತ್ತ ಸುರೇಶ್ ಕೂಡ ನಾಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.